ಉಡುಪಿ: ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಧೀರಜ್ ಶಾಂತಿ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭಸಲ್ಲಿ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಉಪಾಧ್ಯಕ್ಷರಾದ ಮಧುಸೂದನ್ ಹೇರೂರು, ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಕೋಶಾಧಿಕಾರಿ ಅಜಿತ್ ಕುಮಾರ್ ಪೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಪ್ಲಾಸಿಡ್ ನಿಯೋಗದಲ್ಲಿ ಇದ್ದರು.












