ಉಡುಪಿ: ಕೇರಳದಿಂದ ಬಂದಿರುವ ಇಬ್ಬರು ಶಂಕಿತ ಉಗ್ರರನ್ನು ಇಂದು ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಚಿತ ಪಡಿಸಿದ್ದಾರೆ.
ಬೆಳಿಗ್ಗೆ 10.30ರ ಸುಮಾರಿಗೆ ಇಬ್ಬರು ಶಂಕಿತರನ್ನು ಬಂಧಿಸಿರುವ ಪೊಲೀಸರು, ಆ ಇಬ್ಬರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯದ್ದು ತೀವ್ರ ವಿಚಾರಣೆಗೆ ಒಳಡಿಸಿದ್ದಾರೆ ಎನ್ನಲಾಗಿದೆ.
ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದಿದ್ದ ಉಗ್ರರು ಕೇರಳ ಮೂಲಕ ಕರ್ನಾಟಕ ಕರಾವಳಿಯಲ್ಲಿ ಬೀಡು ಬಿಟ್ಟಿರುವ ಸಾಧ್ಯತೆಯಿದ್ದು, ಅದು ಈ ಇಬ್ಬರೇ ಎಂಬ ನಿಟ್ಟಿನಲ್ಲಿ ತನಿಖಾ ತಂಡ ತೀವ್ರ ವಿಚಾರಣೆ ನಡೆಸುತ್ತುದೆ ಎನ್ನಲಾಗಿದೆ.
ಜನವರಿ 8 ರಂದು ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ನಲ್ಲಿ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಎಂಬ ಇಬ್ಬರು ಉಗ್ರರರು ಪೊಲೀಸ್ ಅಧಿಕಾರಿ ವಿಲ್ಸನ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.
ಶಂಕಿತ ಉಗ್ರರ ಬಂಧನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.