ಉಡುಪಿ: ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ರಾಜ್ಯದ ಮೊದಲ ಖಾಸಗಿ ಕೋವಿಡ್ 19 ಆಸ್ಪತ್ರೆಯಾಗಿ ಬುಧವಾರ ಕಾರ್ಯಾರಂಭಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೊರೊನಾ ಸೋಂಕಿತರನ್ನು ಇದೀಗ ಡಾ. ಟಿಎಂಎ ಪೈ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.












