ರಾಯಲ್ ಚಾಲೆಂಜರ್ಸ್ ಬೆಂಗಳೂರು – ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯ; ಆರ್ ಸಿಬಿ’ಗೆ ಸಿಗುತ್ತಾ ಈ ಸಲ ಕಪ್.?

ಬೆಂಗಳೂರು: ಇಂದು (ಜೂ.3) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಫೈನಲ್ ಪಂದ್ಯ ನಡೆಯಲಿದೆ.

ಉಭಯ ತಂಡಗಳು ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಹೀಗಾಗಿ ಈ ಬಾರಿ ಅಭಿಮಾನಿಗಳು ಹೊಸ ಚಾಂಪಿಯನ್ ತಂಡವನ್ನು ನೋಡಲಿದ್ದಾರೆ. ರೆಡ್‌ – ರೆಡ್ ಫೈಟ್‌ನಲ್ಲಿ ಯಾರು ಗೆಲುವು ಸಾಧಿಸುತ್ತಾರೆ? ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ವಿರಾಟ್‌ ಕೊಹ್ಲಿಗಾಗಿ ಆರ್‌ಸಿಬಿ ಆಟಗಾರರು ಪ್ರತಿ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡವನ್ನ ಫೈನಲ್‌ಗೆ ತಂದಿದ್ದಾರೆ. ಹೀಗಾಗಿ ರೆಡ್‌ ಆರ್ಮಿಯ 18 ವರ್ಷಗಳ ಕಾಯುವಿಕೆ ಅಂತ್ಯವಾಗುತ್ತಾ? ಆರ್‌ಸಿಬಿ ಚೊಚ್ಚಲ ಐಪಿಲ್‌ ಟ್ರೋಫಿ ಎತ್ತಿ ಹಿಡಿಯುತ್ತಾ? ಅನ್ನೋ ಕುತೂಹಲ ಮೂಡಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.