ಉಡುಪಿ: ಮುಖ್ಯಮಂತ್ರಿಗಳು ಇಂದು ಕೊರೊನಾ ಹೆಚ್ಚುತ್ತಿರುವ 11 ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಿದ್ದು, ಲಾಕ್ ಡೌನ್ ಸಂಬಂಧಿಸಿದಂತೆ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಅದರಂತೆ ನಾಳೆ (ಜುಲೈ 14) ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬುವುದರ ಬಗ್ಗೆ ತೆಗೆದುಕೊಳ್ಳುತ್ತೇವೆ. ಅಲ್ಲದೆ ಲಾಕ್ ಡೌನ್ ಬಗ್ಗೆಯೂ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆಯಲ್ಲಿ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಂಡರೆ, ಸಾರ್ವಜನಿಕರಿಗೆ ಒಂದು ದಿನ ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಹೋಗುವವರಿಗೆ ಹಾಗೂ ಬರುವವರಿಗೆ ಒಂದು ದಿನದ ಕಾಲಾವಕಾಶ ನೀಡಲಾಗುವುದು. ಅಲ್ಲದೆ, ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡುವುದಿದ್ದರೂ ಒಂದು ದಿನದ ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.