ಉಡುಪಿ: ಗಣರಾಜ್ಯೋತ್ಸವ ದಿನಾಚರಣೆ; ಸಚಿವ ಎಸ್. ಅಂಗಾರರಿಂದ ಧ್ವಜಾರೋಹಣ

ಉಡುಪಿ: ಜಿಲ್ಲೆಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 72ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು, ಗೌರವ ವಂದನೆ ಸ್ವೀಕರಿಸಿದರು. ಆ ನಂತರ ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ ದಳ, ಸಶಸ್ತ್ರ ಪೊಲೀಸ್ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳ ಎನ್.ಸಿ.ಸಿ. ಮತ್ತು ರೆಡ್ ಕ್ರಾಸ್ ತಂಡಗಳ ಪಥ ಸಂಚಲನ ವೀಕ್ಷಿಸಿದರು.

ಶಾಸಕ ಕೆ. ರಘುಪತಿ ಭಟ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಜಿ. ಜಗದೀಶ, ಎಸ್ಪಿ ವಿಷ್ಣುವರ್ಧನ್ ಮೊದಲಾದವರು ಉಪಸ್ಥಿತರಿದ್ದರು.