ಉಡುಪಿ: ಉಡುಪಿ ಜಿಲ್ಲೆಗೆ ಸದ್ಯಕ್ಕೆ ಕೊರೊನಾ ಸೋಂಕಿನ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೊರೊನಾ ಪಾಸಿಟಿವ್ ಬಂದಿರುವ ಮೂರು ವ್ಯಕ್ತಿಗಳ ಸಂಪರ್ಕದಲ್ಲಿದ್ದ ಎಲ್ಲರನ್ನು ತಪಾಸಣೆ ನಡೆಸಿದ್ದು, ಎಲ್ಲರನ್ನು ಉದ್ಯಾವರದ ಎಸ್ ಡಿಎಂ ಆಸ್ಪತ್ರೆ ಹಾಗೂ ಹಾಸ್ಟೇಲ್ ನಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ಹಾಗೆಯೇ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾದರಿಯನ್ನು ಪ್ರಾಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಎಲ್ಲ ವರದಿಗಳಲ್ಲೂ ನೆಗೆಟಿವ್ ಫಲಿತಾಂಶ ಬಂದಿದೆ. ಹಾಗಾಗಿ ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದರು.
ಲಾಕ್ ಡೌನ್ ಅವಧಿ ಮುಗಿಯವರೆಗೂ (ಎ.14) ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಬೇಕು. ಅನಗತ್ಯವಾಗಿ ಯಾರು ರಸ್ತೆಗಳಲ್ಲಿ ಓಡಾಡಬಾರದು ಎಂದು ಎಚ್ಚರಿಕೆ ನೀಡಿದರು.