ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಕಾರ್ಯಕ್ರಮವು ಜನವರಿ 26 ರಿಂದ 28 ರ ವರೆಗೆ ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ,ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗಿರೀಶ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಬೆಂಗಳೂರು ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಬ್ರಾಹಿಂ ಮೈಗೂರ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಎಸ್.ನಂದಾ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
















