ಉಡುಪಿ:ಜ.25 ರಂದು ಸವಿತಾ ಮಹರ್ಷಿ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸವಿತ ಸಮಾಜ (ರಿ) ಇವರ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 11.45 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಸವಿತಾ ಸಮಾಜ (ರಿ) ಅಧ್ಯಕ್ಷ ರಾಜು ಸಿ ಭಂಡಾರಿ ಕಿನ್ನಿಮುಲ್ಕಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಗೋವಿಂದ ಭಂಡಾರಿ ಬನ್ನಂಜೆ ಉಪನ್ಯಾಸ ನೀಡಲಿದ್ದಾರೆ.