ಉಡುಪಿ:ಶಿಷ್ಯವೇತನ : ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ
ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನು
ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ಬಿ ಬ್ಲಾಕ್, ರಜತಾದ್ರಿ, ಕೊಠಡಿ ಸಂಖ್ಯೆ: 304, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574881 ಅಥವಾ 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.