ಶಾಲಾ ವಾಹನ ಪಲ್ಟಿ: 18 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಕಾರೊಂದು ಪಲ್ಟಿ ಹೊಡೆದ ಪರಿಣಾಮ 18ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಅಲೆವೂರಿನ ಪ್ರಗತಿ ನಗರದಲ್ಲಿ ಸೋಮವಾರ ಸಂಭವಿಸಿದೆ.
ಸಂಜೆ ಕರ್ವಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಅಲೆವೂರಿನ ಪ್ರಗತಿ ನಗರದ ಕಾಲೋನಿಗೆ ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಓಮಿನ ಕಾರಿನಲ್ಲಿ 25 ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.