ಉಡುಪಿ (ಉಡುಪಿ ಎಕ್ಸ್ಪ್ರೆಸ್): ಕೋವಿಡ್ ನಿಯಂತ್ರಣಕ್ಕೆ ಸೀಲ್ ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್ಗಳನ್ನು ನಾಳೆ (ಜೂನ್ 9) ಬೆಳಿಗ್ಗೆ 11ರಿಂದ ಜೂನ್ 14ರ ವರೆಗೆ ಸೀಲ್ ಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಪ್ರಸಕ್ತ 50ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, ನಲ್ಲೂರು, ಮರ್ಣೆ, ಹೆಬ್ರಿಯ ವರಂಗ, ಕುಂದಾಪುರದ ಗಂಗೊಳ್ಳಿ, ಆಲೂರು, ಕಾಪುವಿನ ಶಿರ್ವ, ಬೆಳ್ಳೆ, ಬ್ರಹ್ಮಾವರದ ಆವರ್ಸೆ, ಕೊಕ್ಕರ್ಣೆ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದ ಲಾಕ್ಡೌನ್ ಮುಂದುವರಿಸಲಾಗುವುದು.
ಸೀಲ್ ಡೌನ್ ವಿಸ್ತರಿಸಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಳೆ (ಜೂನ್ 9) ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬಳಿಕ ಜೂನ್ 14 ರ ವರೆಗೆ ಮತ್ತೆ 5 ದಿನಗಳ ವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗುವುದು ಎಂದರು.