ಉಡುಪಿ: ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ಈ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು, ಅನುಭವಿ ರಂಗ ಕಲಾವಿದರು ಹಾಗೂ ಗಾಯಕರುಗಳಿಂದ ಇಲಾಖೆಯ ವೆಬ್‌ಸೈಟ್ https://kannadasiri.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 40 ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಪ್ರಥಮ
ಆದ್ಯತೆಯನ್ನು ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 20 ರ ಒಳಗಾಗಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ
ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ [email protected] ಮೂಲಕ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ ಪ್ರದರ್ಶನಗಳಲ್ಲಿ
ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ
ಮಾಹಿತಿ ಹಾಗೂ ವಿವರಗಳಿಗಾಗಿ ಸಿ. ಬಸವಲಿಂಗಯ್ಯ, ವಚನ ಕಲ್ಯಾಣ ನಾಟಕದ ನಿದೇರ್ಶಕರು, ಮೊ.ನಂ.9448538620 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

















