ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.
ಅಗಲಿದ ಹಿರಿಯ ವಕೀಲರಾದ ಮಾಧವ ಆಚಾರ್ಯ ಅವರ ಸಂತಾಪ ಸೂಚಕ ಸಭೆ ಇಂದು (ಜನವರಿ 5ರಂದು) ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷರಾದ ರೋನಾಲ್ಡ್ ಪ್ರವೀಣ್ ತಿಳಿಸಿದ್ದಾರೆ.
















