ಉಡುಪಿ:ಸೆ.11 ರಂದು ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ), ಗಸ್ತು ಅರಣ್ಯ ಪಾಲಕರ ಸಂಘ ಮತ್ತು ವೀಕ್ಷಕರ ಸಂಘ (ರಿ),
ರಕ್ತನಿಧಿ ಕೇಂದ್ರ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಐ.ಎಂ.ಎ (ಇಂಡಿಯನ್ ಮೆಡಿಕಲ್ ಅಸೋಸಿಯೇಷನ್) ಉಡುಪಿ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ 25 ನೇ ವರ್ಷದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಸೆಪ್ಟಂಬರ್ 11 ರಂದು ಬೆಳಗ್ಗೆ 11 ಗಂಟೆಗೆ ನಗರದ ಐ.ಎಂ.ಎ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ಉದ್ಘಾಟಿಸಲಿದ್ದು, ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ.ನಿತ್ಯಾನಂದ ನಾಯಕ್, ಐ.ಎಂ.ಎ ಅಧ್ಯಕ್ಷ ಡಾ.ಕಲ್ಯಾ ಸುರೇಶ್ ಶೆಣೈ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಹೆಚ್. ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.