ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಲಿತ ಹೋರಾಟಗಾರ ಶೇಖರ್ ಹೆಜಮಾಡಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿಯವರನ್ನು ದಿನಾಂಕ 23-07-2025 ರಿಂದ ಜಾರಿಗೆ ಬರುವಂತೆ ಆಯ್ಕೆ ಮಾಡಿ ಆದೇಶ ಹೊರಡಿಸಿರುತ್ತಾರೆ.












