ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವು ಜನವರಿ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಹಾಗೂ ಮತ್ತಿತರರು ಭಾಗವಹಿಸಲಿದ್ದು, ನಿವೃತ್ತ ಭಾರತೀಯ ಸೇನೆಯ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಗುವುದು. ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಉಪನ್ಯಾಸ ನೀಡಲಿದ್ದಾರೆ.

















