ಉಡುಪಿ: ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವುದರಿಂದ ರಾಜ್ಯ ಸರ್ಕಾರವು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ದಿಢೀರ್ ಬದಲಾವಣೆ ಮಾಡಿದ್ದು, ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಇಂದಿನಿಂದ ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ಸರ್ಕಾರ ತಿಳಿಸಿದೆ.
ಸರ್ಕಾರದ ಹೊಸ ನಿಯಮದಂತೆ ಉಡುಪಿ ನಗರ ವ್ಯಾಪ್ತಿಯಲ್ಲಿ ನಗರಸಭೆ ಅಧಿಕಾರಿಗಳು ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮೈಕ್ ಮೂಲಕ ಸೂಚನೆ ನೀಡಿದರು.
ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.