ಬೈಂದೂರು: ತಾಲೂಕು ಆಡಳಿತ ಬೈಂದೂರು ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 25 ರಂದು ಬೆಳಗ್ಗೆ 11 ಗಂಟೆಗೆ ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.












