ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳು ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲು ಅರ್ಹ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.karnatakatourism.org/sevasindhu.karnataka.gov.in ಅಥವಾ ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ರಜತಾದ್ರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಮಣಿಪಾಲ ದೂ.ಸಂಖ್ಯೆ:0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.