ಉಡುಪಿ:ಅ.10 ರಂದು ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಉಡುಪಿ: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ಕಾರ್ಡ್ ವಿತರಣೆಯನ್ನು ಅ.10 ರಂದು 11 ಗಂಟೆಗೆ ಉಡುಪಿ ನಗರದ ಆರೂರು ಲಕ್ಮೀನಾರಾಯಣ್ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಎ. ಸುವರ್ಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಎಸ. ಲಾಡ್ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ
ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ,
ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ,
ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ
ಮೊಹಮ್ಮದ್ ಮೊಹಸಿನ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ,
ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್ ಗೋಪಾಲಕೃಷ್ಣ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ
ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಭಾರತಿ.ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.