ಉಡುಪಿ: ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ (ಜಿಎಸ್ ಟಿ) ಜಾಗೃತಿ ಕಾರ್ಯಕ್ರಮವನ್ನು ಇದೇ ಆ.4ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ಆನಂದ್ ಕಾರ್ನಾಡ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಇತ್ತೀಚೆಗೆ ರಾಜ್ಯ ಸರ್ಕಾರದ GST ನೋಂದಣಿ ಹಾಗೂ ತೆರಿಗೆಗೆ ಸಂಬಂಧಿಸಿದ ಸ್ಪಷ್ಟ ಅಧಿಸೂಚನೆಯ ಮೇರೆಗೆ ಅನೇಕ ವರ್ತಕರು, ಉದ್ಯಮಿಗಳು ಹಾಗೂ ಸಣ್ಣ ವ್ಯವಹಾರಸ್ಥರು ಲಕ್ಷಾಂತರ ರೂಪಾಯಿಗಳ ತೆರಿಗೆ ಬಾಕಿ ಎಂಬ ನೋಟೀಸ್ ಗಳನ್ನು ಸ್ವೀಕರಿಸುತ್ತಿದ್ದಾರೆ. ಈ ಪ್ರಯುಕ್ತ ಈ ನೋಟೀಸ್‌ಗಳಿಗೆ ಸರಿಯಾಗಿ ಪ್ರತಿಕ್ರಿಯಿಸುವ ಮಾರ್ಗದರ್ಶಿ, GST ನಿಯಮಗಳು, ಫೈಲಿಂಗ್ ಭಾದ್ಯತೆಗಳು, ಸ್ಪಷ್ಟ ತಿಳುವಳಿಕೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಹಿರಿಯ GST ಅಧಿಕಾರಿಗಳು ಭಾಗಿಯಾಗಲಿರುವ ಈ 2 ಗಂಟೆಗಳ ಕಾರ್ಯಕ್ರಮದಲ್ಲಿ ವರ್ತಕರು ಮತ್ತು ಇತರ ಉದ್ಯಮಿಗಳಿಗೆ ಉಪಯುಕ್ತ ಮಾರ್ಗದರ್ಶಿ ಹಾಗೂ ಸಂದೇಹ ನಿವಾರಣೆಗಾಗಿ ಸಂವಾದ ನಡೆಯಲಿದೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಓಸ್ವಾಲ್ಡ್ ಸಲ್ದಾನಾ, ಜೊತೆ ಕಾರ್ಯದರ್ಶಿ ರಶಿತ್, ಉಪಾಧ್ಯಕ್ಷ ಮ್ಯಾಕ್ಸಿಂ ಸಲ್ದಾನಾ ಇದ್ದರು.












