ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿ/ ಪ್ರೋತ್ಸಾಹಧನ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ
ಪ್ರಶಸ್ತಿ, ಗುರಿ-ಒಲಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿವೇತನ.ಅರ್ಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ
ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.


















