ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ ದೇವಳದ ರಥೋತ್ಸವ ಮುಂದೂಡಿಕೆ

ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏ.25ರಿಂದ 29ರವರೆಗೆ ನಡೆಯಬೇಕಾಗಿದ್ದ ವಾರ್ಷಿಕ ರಥೋತ್ಸವವನ್ನು ಕೊರೋನಾ ಕೋವಿಡ್ -19ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಭಕ್ತರು ಸಹಕರಿಸಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.