ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ಸರಳ ರೀತಿಯಲ್ಲಿ ಸಂಪ್ರದಾಯದಂತೆ ನೆರವೇರಲಿದೆ.
ಭಕ್ತಿಪೂರ್ವಕವಾಗಿ ಸಂಭ್ರಮದಿಂದ ಆಚರಿಸಲ್ಪಡುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವಕ್ಕೆ ವಿವಿಧ ಗಣ್ಯರು ಶುಭಾಶಯ ಕೋರಿದ್ದಾರೆ.
ಅಷ್ಟಮಿ ಹಿನ್ನೆಲೆಯಲ್ಲಿ ಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ ಮಾಡಿ ಮಹಾಪೂಜೆ ನೆರವೇರಿಸುವರು. ಇಂದು ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುವುದು. ನಾಳೆ (ಸೆ.11) ವಿಟ್ಲಪಿಂಡಿ ಉತ್ಸವ ನಡೆಯಲಿದೆ.