ಉಡುಪಿ: ಶೇ. 100 ಫಲಿತಾಂಶ ದಾಖಲಿಸಿದ ಶಾಲೆಗಳ ವಿವರ ಇಲ್ಲಿದೆ

ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ಶಾಲೆಗಳ ವಿವರ ಈ ಕೆಳಕಂಡಂತಿದೆ.
ಉಡುಪಿ ಅನಂತೇಶ್ವರ ಹೈಸ್ಕೂಲ್ ನ ಪರೀಕ್ಷೆ ಬರೆದ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 100 ಫಲಿತಾಂಶ ದಾಖಲಾಗಿದೆ. ಹೆಜಮಾಡಿಕೋಡಿ ಜಿಎಚ್ಎಸ್ ಪ್ರೌಢಶಾಲೆಯ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 100 ಫಲಿತಾಂಶ ದಾಖಲಾಗಿದೆ. ಕಟಪಾಡಿ ಎಸ್ ವಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 27 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಶೇ. 100 ಫಲಿತಾಂಶ ದಾಖಲಾಗಿದೆ. ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 24 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. ಶೇ. 100 ಫಲಿತಾಂಶ ದಾಖಲಾಗಿದೆ ಎಂದು ಉಡುಪಿ ಬಿಇಒ ತಿಳಿಸಿದ್ದಾರೆ.
ಯೆಡಾಡಿಮತ್ತ್ಯಾಡಿ ಲಿಟಲ್ ಸ್ಟಾರ್ ಪ್ರೌಢಶಾಲೆ, ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ, ಶಂಕರನಾರಾಯಣ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಗಂಗೊಳ್ಳಿ ಸ್ಟೆಲ್ಲಾ ಮರೀಸ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಪಡೆದಿದೆ.
ನುಕ್ಕೂರು ಸರ್ಕಾರಿ ಪ್ರೌಢಶಾಲೆ, ಬ್ರಹ್ಮಾವರ ಮೊರಾರ್ಜಿ ದೇಸಾಯಿ ಪ್ರೌಢಶಾಲೆ, ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಕಲ್ಯಾಣಪುರ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ ಎಂದು ಬ್ರಹ್ಮಾವರ ಬಿಇಒ ತಿಳಿಸಿದ್ದಾರೆ.
ಚಿತ್ತೂರು ಸರಕಾರಿ ಪ್ರೌಢಶಾಲೆ, ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಹಾಗೂ ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ ಎಂದು ಬೈಂದೂರು ಬಿಇಒ ತಿಳಿಸಿದ್ದಾರೆ.