ಉಡುಪಿ:ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರಕಟ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2022 ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧಿಕೃತ ವೆಬ್‌ಸೈಟ್ dpl.karnataka.gov.in ನಲ್ಲಿ ಮಾರ್ಚ್ 2 ರಂದು ಪ್ರಕಟಿಸಲಾಗಿರುತ್ತದೆ.

ಸದರಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಿಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ಅಧಿಕೃತ ಮಾಹಿತಿ ದಾಖಲಾತಿಗಳೊಂದಿಗೆ ಮಾರ್ಚ್ 16 ರ ಸಂಜೆ 5.30 ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4 ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯುಕ್ತರ ಕಚೇರಿ ದೂ.ಸಂಖ್ಯೆ: 080-22864990, 22867358 ಅಥವಾ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2523438 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.