ಉಡುಪಿ: ಸ್ಟೆನೋಗ್ರಾಫರ್ ಗ್ರೇಡ್ ‘ಸಿ’, ‘ಡಿ’ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್‍ಲೈನ್ ಸ್ಫರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ (www.ssckkr.kar.nic.in) ಅಥವಾ (http://ssc.nic.in) ಅಥವಾ ದೂರವಾಣಿ ಸಂಖ್ಯೆ 080 2550 2520, 94838 62020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.