ಉಡುಪಿ: ಇಲ್ಲಿನ ಬನ್ನಂಜೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನೆಲಮಹಡಿಯಲ್ಲಿ ‘ಉಡುಪಿ ಸ್ಟೋರ್ಸ್’ (Udupi Stores) ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳ ಮಳಿಗೆಯ ಉದ್ಘಾಟನಾ ಕಾರ್ಯಕ್ರಮವು ಮೇ.10 ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ರಾಜೇಶ್ ಶೆಟ್ಟಿ, ನಗರಸಭೆ ಪೌರಾಯುಕ್ತ ರಾಯಪ್ಪ, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಡಿಟಿಓ ಕಮಲ್ ಕುಮಾರ್, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಉಡುಪಿ ಡಿಪೋ ಮ್ಯಾನೇಜರ್ ಶಿವರಾಮ್ ನಾಯ್ಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
24X7 ತೆರೆದಿರಲಿರುವ ಏಕೈಕ ಮಳಿಗೆ
ಉಡುಪಿ ಪರಿಸರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ತೆರೆದಿರಲಿರುವ ಏಕೈಕ ಮಳಿಗೆ ಇದಾಗಿದ್ದು, ಸಾಂಪ್ರದಾಯಿಕ ತಿಂಡಿ ತಿನಿಸು ಹಾಗೂ ಕರಕುಶಲ ವಸ್ತುಗಳಲ್ಲಿ ಪ್ರಾವೀಣ್ಯತೆ ಹೊಂದಿರುವ ವಿ21 ಗ್ರೂಪ್ ಉಡುಪಿ ಬ್ರ್ಯಾಂಡ್ ನ ತಿಂಡಿ-ತಿನಿಸುಗಳನ್ನು ಇನ್ನಷ್ಟು ಪ್ರಚುರಗೊಳಿಸುವ ಉದ್ದೇಶವನ್ನು ಹೊಂದಿದೆ.