ಉಡುಪಿ: ಕೋವಿಡ್ ಪಾಸಿಟಿವಿಟಿ ದರವನ್ನು ಇಳಿಕೆ ಮಾಡುವ ಉದ್ದೇಶದಿಂದ ಹಾಗೂ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಂದಿನ ಆದೇಶದವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ವೀಕೆಂಡ್ ಕರ್ಪ್ಯೂ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.
ವೀಕೆಂಡ್ ಕರ್ಪ್ಯೂ ಮಾರ್ಗಸೂಚಿ ಈ ಕೆಳಕಂಡಂತಿದೆ.
ಜಿಲ್ಲೆಯಾದ್ಯಂತ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಜಿಲ್ಲೆಯಾದ್ಯಂತ ಮಾರ್ಗಸೂಚಿಗಳಂತೆ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ .
ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ.
ಪಬ್ ಗಳಿಗೆ ಅನುಮತಿ ಇರುವುದಿಲ್ಲ
ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.
ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ ಸಮಾರಂಭಗಳು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.
ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್ಗಳನ್ನು ನೀಡಬೇಕು.
ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.
ಕೋವಿಡ್-19 ಸೂಕ್ತ ನಡವಳಿಕೆಯಂತೆ ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
ಕೋವಿಡ್-19 ಸೂಕ್ತ ನಡವಳಿಕೆಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.(Only for seating Capacity of Public Transport )
ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ (Closed Places) ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.
ಸಿನೆಮಾ ಹಾಲ್ಗಳು / ಮಲ್ಟಿಪ್ಲೆಕ್ಸ್ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳು ಮತ್ತು ಅಂತಹದೇ ರೀತಿಯ ಸ್ಥಳಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ COVID ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.
ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಿನಾಂಕ: 12-11-2020 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು “ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ/ಜಲ ಸಂಬಂಧಿತ ಸಾಹಸ ಚಟುವಟಿಕೆ (water sports/water related adventure activities) ಗಳಿಗೆ ಅನುಮತಿ ಇರುವುದಿಲ್ಲ.
ವಿದ್ಯಾಭ್ಯಾಸದ ಸಲುವಾಗಿ ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ನರ್ಸಿಂಗ್, ಮೆಡಿಕಲ್, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಒಳಗೊಂಡಂತೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರವೇಶಿಸುವ ಪೂರ್ವದಲ್ಲಿ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ -19 RTPCR ನೆಗೆಟಿವ್ ವರದಿಯನ್ನು ಹೊಂದಿರುವುದು. ಮತ್ತು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಒಳಪಡುವುದು ಹಾಗೂ ಕೊನೆಯ ದಿನ RTPCR ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವುದು.
ಉಡುಪಿ ಜಿಲೆಯಲ್ಲಿ ಉದ್ಯೋಗ ಹೊಂದಿದ್ದು, ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ಅಥವಾ ಉಡುಪಿಗೆ ಪ್ರವೇಶಿಸುವ ಹಿಂದಿನ 7 ದಿನಗಳಲ್ಲಿ ಕೇರಳ ರಾಜ್ಯಕ್ಕೆ ಭೇಟಿ ನೀಡಿದ ಎಲ್ಲಾ ಉದ್ಯೋಗಿಗಳಿಗೆ ಮೇಲಿನ 12ನೇ ವಾಕ್ಯವೃಂದದ ಮಾರ್ಗಸೂಚಿಗಳು ಅನ್ವಯವಾಗುತ್ತದೆ. ಇವುಗಳನ್ನು ಜ್ಯಾರಿಗೊಳಿಸುವುದು ಆಯಾ ಆಡಳಿತ ಮಂಡಳಿಗಳು / ಉದ್ಯೋಗದಾತರ ಜವಾಬ್ದಾರಿಯಾಗಿರುತ್ತದೆ.
ಕೋವಿಡ್ ಸಮುಚಿತ ವರ್ತನೆ
COVID-19 ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಲು ಮುಖಗವಸುಗಳನ್ನು ಧರಿಸುವುದು, ಕೈಗಳ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು.
ಮಾಸ್ಕ್ ಧರಿಸುವುದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅತ್ಯವಶ್ಯಕ ಕ್ರಮವಾಗಿದ್ದು, ಮುಖಗವಸುಗಳನ್ನು ಧರಿಸದ ವ್ಯಕ್ತಿಗಳ ವಿರುದ್ಧ ಮಹಾ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ. 250/- ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100/- ದಂಡ ವಿಧಿಸಲಾಗುವುದು.
ಕೋವಿಡ್ ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು.
ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ.