ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ.ಜಾತಿ ಮತ್ತು ಪ. ಪಂಗಡದ ಯುವಕ ಯುವತಿಯರಿಗೆ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕೈಗಾರಿಕಾ ಘಟಕ ಸ್ಥಾಪಿಸಲು, ಬ್ಯಾಂಕಿನಿಂದ ಸಾಲ ಪಡೆದು ಸಹಾಯಧನಕ್ಕಾಗಿ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.