ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ
ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












