ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಮಂದಿ ಶಂಕಿತರು ಪೊಲೀಸರ ವಶಕ್ಕೆ.

ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಎಲ್ಲಾ 8 ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.