ಉಡುಪಿ: ಇಲ್ಲಿನ ಸ್ವರ್ಣಾನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಮತ್ತು ಮರಳು ಕಳ್ಳಸಾಗಾಣಿಕೆಯಲ್ಲಿ ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವ ಆರೋಪವಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸ್ವರ್ಣಾ ನದಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆ ಬರುತ್ತಿದ್ದು, ಅವರಿಗೆ ತಕ್ಷಣ ಪೋಲಿಸ್ ಭದ್ರತೆ ಒದಗಿಸಬೇಕು. ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.