ಉಡುಪಿ ತಾಲೂಕು ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗೌರವ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಉಡುಪಿಯ ನೂತನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ನಾಡೋಜ ಪ್ರೊ. ಕೆ. ಪಿ ರಾವ್ ಅಭಿನಂದನಾ ಸಮಿತಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿಯವರು ಗೌರವಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಸಾಪ ಜಿಲ್ಲಾ ಸಮಿತಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.