ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಇಂದು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉಡುಪಿ ಬನ್ನಂಜೆ ನಾರಾಯಣ ಗುರು ಮಂದಿರದ ಶಿವಗಿರಿ ಸಭಾಗ್ರಹದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿನಯ್ ಕುಮಾರ್ ಸೊರಕೆ , ಮಾಜಿ ಸಚಿವರು ಕರ್ನಾಟಕ ಸರ್ಕಾರ ಇವರು ನೆರವೇರಿಸಿದರು. ಮಹಿಳೆಯರ ಪರವಾಗಿ ಗ್ರಾಮ ಅಭಿವೃದ್ಧಿ ಯೋಜನೆಯು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ, ಮಹಿಳೆಯರು ಒಂದಲ್ಲ ಒಂದು ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವಂತಾಗಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಭಾರತಿ ಜಯಕರ್, ವಲಯಾಧ್ಯಕ್ಷರು ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರು ವಹಿಸಿಕೊಂಡಿದ್ದರು. ಸ್ವಉದ್ಯೋಗದ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆನಂದ ಸುವರ್ಣ, ಪ್ರಾದೇಶಿಕ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕರಾವಳಿ ಪ್ರಾದೇಶಿಕ ಕಚೇರಿ. ಇವರು ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ, ಜ್ಞಾನವಿಕಾಸ ಕೇಂದ್ರದಲ್ಲಿ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಬೇಕು, ಸದಸ್ಯರು ಕುಟುಂಬದಲ್ಲಿ ಅನ್ಯೋನ್ಯತೆಯನ್ನು ಕಾಪಾಡಿಕೊಂಡು ಬರಬೇಕು ಹಿರಿಯ ನಾಗರಿಕರಿಗೆ ಗೌರವ ಕೊಡುವುದು, ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿಕೊಡುವುದು ಪೋಷಕರ ಜವಾಬ್ದಾರಿಯಾಗಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಯೋಜನೆಯ ಕಾರ್ಯಕರ್ತರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಿ ಸಹಕಾರ ಪಡೆಯಿರಿ ಎಂದು ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ.ನಿಕೇತನ, ಪ್ರಾಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥರು, ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸ್ವ-ಉದ್ಯೋಗದ ಬಗ್ಗೆ, ಮಾಹಿತಿ ನೀಡಿದರು. ಪ್ರತಿಯೊಬ್ಬ ಮಹಿಳೆಯು ತನ್ನಲ್ಲಿ ಒಂದಲ್ಲ ಒಂದು ಕೌಶಲ್ಯವನ್ನು ಹೊಂದಿರುತ್ತಾಳೆ, ಅದಕ್ಕೆ ಸರಿಯಾದ ಪ್ರೇರಣೆ ದೊರೆತಾಗ ಯಶಸ್ವಿ ಮಹಿಳೆಯಾಗಿ ಹೊರಹೊಮ್ಮಲು ಸಾಧ್ಯವಿದೆ, ಸ್ವ ಉದ್ಯೋಗ ಕ್ಕೆ ಪೂರಕವಾಗಿ ಹಲವಾರು ಅವಕಾಶಗಳು ಇದೆ ಅದನ್ನು ಮಹಿಳೆಯರು ಉಪಯೋಗಿಸಿಕೊಳ್ಳುವ ಸಾವಲಂಬಿ ಬದುಕಿಗೆ ಮುನ್ನುಡಿ ಇಡಬೇಕು. ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸ್ವ ಉದ್ಯೋಗಕ್ಕೆ ಪೂರಕವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿಜಯನಾರಾಯಣ ನಾಯ್ಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ, ಸತ್ಯಾನಂದ ನಾಯಕ್ಆತ್ರಾಡಿ , ಅಧ್ಯಕ್ಷರು ತಾಲೂಕು ತಾಲೂಕು ಜನ ಜಾಗೃತಿ ವೇದಿಕೆ, ಉಡುಪಿ, ಜ್ಞಾನವಿಕಾಸ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಅಮೃತ ಮೇಡಂ,ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ್, ಕೇಂದ್ರ ಒಕ್ಕೂಟ ಸಮಿತಿಯ ಸುಂದರ ಕಲ್ಮಾಡಿ ರವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಮಂಜುನಾಥ್ ಪ್ರಸಾದ್ ಕೃಷಿ ಮೇಲ್ವಿಚಾರಕರು, ಕಾರ್ಯಕ್ರಮದ ಸಾಧನಾ ವರದಿಯನ್ನು ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಹಾಗೂ ಧನ್ಯವಾದಗಳು ಸೇವಾ ಪ್ರತಿನಿಧಿ ಶಾಲಿನಿರವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಸದಸ್ಯರ ಸ್ವ ಉದ್ಯೋಗ ಘಟಕಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಗಳು, ಹಾಗೂ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 500 ಮಹಿಳಾ ಸದಸ್ಯರು ಭಾಗವಹಿಸಿದ್ದರು.
















