ಉಡುಪಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಕೃಷ್ಣ ಎಸ್.ಹೆಬ್ಸೂರು ಅವರ ನಿವಾಸ ಹಾಗೂ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ದೊಡ್ಡಣಗುಡ್ಡೆಯಲ್ಲಿರುವ ಅವರ ನಿವಾಸಕ್ಕೆ ತೆರಳಿದ ಎಸಿಬಿ ಅಧಿಕಾರಿಗಳು ಆಸ್ತಿಪತ್ರಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.