ಉಡುಪಿ: 2019-20ನೇ ಸಾಲಿನಲ್ಲಿ ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆಯನ್ನು ಶೇ. 7ಕ್ಕೆ ಮಿತಿಗೊಳಿಸಿ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುವ ಕುರಿತು ಮಾರ್ಗಸೂಚಿ ಪ್ರಕಟಿಸಲಾಗಿದೆ.
ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ ಡಿಸೆಂಬರ್ 2 ಮತ್ತು 3 ರಂದು ಬೆಳಿಗ್ಗೆ 10 ರಿಂದ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದೆ.
ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗದಿಪಡಿಸಿದ ಸಮಯದಲ್ಲಿ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಹಾಗೂ ಆದ್ಯತೆ ಮೇರೆಗೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳು ಸಂಬಂಧಿಸಿದ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.