ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಕಿಟ್ ಹಾಗೂ ಚೆಕ್ ವಿತರಣೆ

ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ,ಇದರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಮೂರ್ತಿಯವರ ಸಹಕಾರದಿಂದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಅರ್ಚಕರು, ಪುರೋಹಿತರು, ಹಾಗೂ ವಿಪ್ರ ಬಾಂಧವರ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನಿತ್ಯಾವಶ್ಯಕ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ಹಾಗೂ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ, ತಾಲೂಕಿನಲ್ಲಿ 31 ಬ್ರಾಹ್ಮಣ ವಲಯಗಳಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ  ಪ್ರತಿ ವಲಯದ 2 ಬ್ರಾಹ್ಮಣ  ಕುಟುಂಬಗಳಿಗೆ ತಲಾ 2000 ರೂಪಾಯಿಯ ಚೆಕ್ ಗಳ ವಿತರಣಾ ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ  ಕರ್ನಾಟಕ ಬ್ಯಾಂಕ್ ರೀಜಿನಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ,ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ, ಕಾರ್ಯದರ್ಶಿ ಸಂದೀಪ್ ಮಂಜ,ಉಪಾಧ್ಯಕ್ಷರಾದ ಶ್ರೀಕಾಂತ ಉಪಾಧ್ಯಾಯ, ನಾಗರಾಜ ಉಪಾಧ್ಯಾಯ, ಖಜಾಂಜಿ ಶಾಂತರಾಮ ಭಟ್, ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ವಿವಿಧ ವಲಯಗಳ ವಿಪ್ರಬಾಂಧವರು ಉಪಸ್ಥಿತರಿದ್ದರು.