ಉಡುಪಿ: ಮೈಸೂರಿನ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಗುಡ್ಡಿಮನೆ ನಡುಜೆಡ್ಡು ನಿವಾಸಿ ಮಂಜುನಾಥ ಮರಕಾಲ (48) ಎಂಬ ವ್ಯಕ್ತಿಯು ನವೆಂಬರ್ 5 ರಂದು ಕೆಲಸದ ಸ್ಥಳದಿಂದ ನಾಪತ್ತೆಯಾಗಿರುತ್ತಾರೆ.
5 ಅಡಿ 10 ಇಂಚು ಎತ್ತರ, ದಪ್ಪ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಥವಾ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ. ಸಂಖ್ಯೆ: 0820-2561966 ಅಥವಾ ಬ್ರಹ್ಮಾವರ ಠಾಣೆಯ ಪೊಲೀಸ್ ಉಪನಿರೀಕ್ಷಕರು ದೂ. ಸಂಖ್ಯೆ: 08250-2561044 ನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.