ಉಡುಪಿ: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಬರೆದಿರುವ ‘ತುಳು-ಕೊಡವ ಭಾಷೆಗಳ ಅಳಿವು ಉಳಿವು’ (ಸಂಸತ್ ಭಾಷಣಗಳು ಭಾಗ-1) ಪುಸ್ತಕ ಬಿಡುಗಡೆ ಸಮಾರಂಭ ಉಡುಪಿಯ ಬಡಗಬೆಟ್ಟು ಜಗನ್ನಾಥ ಸಭಾಭವನದಲ್ಲಿ ಜ.24ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಜಿ ಎಐಸಿಸಿ ಸದಸ್ಯ ಅಮೃತ್ ಶಣೈ ಮಾಹಿತಿ ನೀಡಿದರು.
ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮಿನ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕದ ಲೇಖಕರು ಆಗಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ ಡಾ. ಮಹಾಬಲೇಶ್ವರ ರಾವ್, ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಧರ್ಮಪಾಲ ದೇವಾಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ನಾರಾಯಣ ಶೇರಿಗಾರ್, ಸಮಾಜ ಸೇವಕ ಯಜ್ಞೇಶ್ ಆಚಾರ್ ಉಪಸ್ಥಿತರಿದ್ದರು.