ತೋಟಗಾರಿಕಾ ಬೆಳೆಗಳ ಸರಬರಾಜುಗೆ  ಲಾಕ್ ಡೌನ್ ನಿಂದ ವಿನಾಯತಿ: ಜಿಲ್ಲಾಧಿಕಾರಿ

ಉಡುಪಿ  ಏ.1:  ಉಡುಪಿ ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಪ್ರಯುಕ್ತ ತೋಟಗಾರಿಕೆ ಬೆಳೆಗಾರರು ತಾವು ಬೆಳೆದ, ದಾಸ್ತಾನು ಮಾಡಿಕೊಂಡಿರುವ ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆಗೆ, ಹೊರ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ.

ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ಬೆಳೆದ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ತೋಟಗಾರಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸಬೇಕು ಮತ್ತು ಕಡ್ಡಾಯವಾಗಿ ಉಪಯೋಗಿಸುವ ಮೂಲಕ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಕಛೇರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಉಡುಪಿ ಹಾಗೂ ಕಾರ್ಕಳ – 9481440812, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಕುಂದಾಪುರ- 9900565469 ಇವರನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.