ಉಡುಪಿ: ಜಿಲ್ಲೆಯಲ್ಲಿ ಇಂದು 182 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಉಡುಪಿ ತಾಲ್ಲೂಕಿನ 75, ಕುಂದಾಪುರ ತಾಲ್ಲೂಕಿನ 55 ಹಾಗೂ ಕಾರ್ಕಳ ತಾಲ್ಲೂಕಿನ 51 ಮಂದಿಗೆ ಸಹಿತ ಜಿಲ್ಲೆಯಲ್ಲಿ ಒಟ್ಟು 182 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಅದರಲ್ಲಿ 107 ಮಂದಿ ಪುರುಷರು ಹಾಗೂ 75 ಮಹಿಳೆಯರು ಒಳಗೊಂಡಿದ್ದಾರೆ. ಇಂದು 50 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 779 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
54 ವರ್ಷದ ಮಹಿಳೆ ಕೊರೊನಾಗೆ ಬಲಿ:
ಉಡುಪಿ ತಾಲ್ಲೂಕಿನ ಎಳ್ಳಾರೆಯ ನಿವಾಸಿ 54 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.