ಉಡುಪಿ: ಇಂದು 219 ಮಂದಿಗೆ ಕೊರೊನಾ ಪಾಸಿಟಿವ್: ಕಾರ್ಕಳದ 35 ವರ್ಷದ ಯುವಕ ಸಹಿತ ನಾಲ್ಕು ಮಂದಿ ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 218 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6510ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 112 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 71 ಮಂದಿ ಸಹಿತ 183 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3768 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2676 ಸಕ್ರಿಯ ಕೊರೊನಾ ಸೋಂಕಿತರಿದ್ದು, 1396 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1280 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಾಲ್ಕು ಮಂದಿ ಕೊರೊನಾಗೆ ಬಲಿ:
ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿ ತಾಲ್ಲೂಕಿನ 66 ವರ್ಷದ ವ್ಯಕ್ತಿ, 41 ವರ್ಷದ ಪುರುಷ, ಕಾರ್ಕಳ ತಾಲ್ಲೂಕಿನ 35 ವರ್ಷದ ಯುವಕ ಹಾಗೂ ಬೈಂದೂರು ತಾಲ್ಲೂಕಿನ 48 ವರ್ಷದ ಪುರುಷ ಕೊರೊನಾದಿಂದ ಮೃತಪಟ್ಟಿದ್ದಾರೆ.