ಉಡುಪಿ: ಜಿಲ್ಲೆಯಲ್ಲಿ ಇಂದು 237 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7975ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 106 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 154 ಮಂದಿ ಸಹಿತ 260 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5361 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2537ಸಕ್ರಿಯ ಕೊರೊನಾ ಸೋಂಕಿತರಿದ್ದು, 1398 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1139 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.












