ಉಡುಪಿಯಲ್ಲಿ ಇಂದು 365 ಮಂದಿ ಕೊರೊನಾದಿಂದ ಗುಣಮುಖ: ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 204 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 161 ಮಂದಿ ಸಹಿತ 365 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 6857 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2729 ಸಕ್ರಿಯ ಕೊರೊನಾ ಸೋಂಕಿತರಿದ್ದು, 1130 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1599 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
*ಕೊರೊನಾಗೆ ಇಬ್ಬರು ಬಲಿ*
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಕುಂದಾಪುರ ತಾಲ್ಲೂಕಿನ 61 ವರ್ಷದ ವ್ಯಕ್ತಿ ಹಾಗೂ ಉಡುಪಿ ತಾಲ್ಲೂಕಿನ 80 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ 82ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.