ಉಡುಪಿ: ಇಂದು 282 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 282 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 48 ಮಂದಿ ಸಹಿತ 97 ಮಂದಿ  ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3444 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2697 ಸಕ್ರಿಯ ಕೊರೊನಾ ಸೋಂಕಿತರಿದ್ದು, 1412 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1285 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.