ಉಡುಪಿ: 314 ಮಂದಿಗೆ ಕೊರೊನಾ ಪಾಸಿಟಿವ್: ಐದು ಮಂದಿ ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 314 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5919ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 59 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 30 ಮಂದಿ ಸಹಿತ 89 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3347 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2512 ಸಕ್ರಿಯ ಕೊರೊನಾ ಸೋಂಕಿತರಿದ್ದು, 1287 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1225 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾಗೆ ಐದು ಬಲಿ:
ಉಡುಪಿಯಲ್ಲಿ ಇಂದು ಕೊರೊನಾಗೆ ಐದು ಮಂದಿ ಮೃತಪಟ್ಟಿದ್ದಾರೆ. ಕುಂದಾಪುರ ತಾಲ್ಲೂಕಿನ 56 ವರ್ಷದ ಪುರುಷ, ಉಡುಪಿ ತಾಲ್ಲೂಕಿನ 76 ವರ್ಷದ ವೃದ್ಧ, 50 ವರ್ಷದ ಮಹಿಳೆ, 77 ವರ್ಷದ ವೃದ್ಧ ಹಾಗೂ 65 ವರ್ಷದ ಪುರುಷ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.