ಉಡುಪಿ: ಇಂದು 322 ಮಂದಿಗೆ ಕೊರೊನಾ ಪಾಸಿಟಿವ್: ಐದು ಮಂದಿ ಕೊರೊನಾದಿಂದ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು 322 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7497ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 333 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 281 ಮಂದಿ ಸಹಿತ 614 ಸೋಂಕಿತರು ಇಂದು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ 4872 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2550 ಸಕ್ರಿಯ ಕೊರೊನಾ ಸೋಂಕಿತರಿದ್ದು, 1301 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1249 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
*ಐವರು ಕೊರೊನಾಗೆ ಬಲಿ*
ಇಂದು ಜಿಲ್ಲೆಯಲ್ಲಿ ಐದು ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿ ತಾಲ್ಲೂಕಿನ 63 ವರ್ಷದ ವ್ಯಕ್ತಿ, ಕುಂದಾಪುರ ತಾಲ್ಲೂಕಿನ 86 ವರ್ಷದ ವೃದ್ಧ, 48 ವರ್ಷದ ವ್ಯಕ್ತಿ, 48 ವರ್ಷದ ಪುರುಷ ಹಾಗೂ 55 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.