ಉಡುಪಿಯಲ್ಲಿ ಇಂದು 360 ಮಂದಿ ಕೊರೊನಾದಿಂದ ಗುಣಮುಖ: ಇಬ್ಬರು ಮಹಿಳೆಯರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 184 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 176 ಮಂದಿ ಸಹಿತ 360 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 6492 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಇಂದು 349 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9390 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2818 ಸಕ್ರಿಯ ಕೊರೊನಾ ಸೋಂಕಿತರಿದ್ದು, 1249 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1569 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾಗೆ ಇಬ್ಬರು ಬಲಿ:
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಕಾರ್ಕಳ ತಾಲ್ಲೂಕಿನ 56 ವರ್ಷದ ಮಹಿಳೆ ಹಾಗೂ ಉಡುಪಿ ತಾಲ್ಲೂಕಿನ 69 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ 80ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ